
ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 16 ಪೋಸ್ಟ್ ಗಳು ಖಾಲಿ ಇದ್ದು ಅದರಲ್ಲಿ ಸೀನಿಯರ್ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕ ಮುಗಿಯುವದರೊಳಗೆ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ಸಂಖ್ಯೆ -16
ಅಪ್ಲಿಕೇಶನ್ ಪ್ರಾರಂಭ ದಿನಾಂಕ-10 ಜುಲೈ 2024
ಅಪ್ಲಿಕೇಶನ್ ಅಂತಿಮ ದಿನಾಂಕ -24 ಜುಲೈ 2024
ಕೆಲಸದ ಸ್ಥಳ – ಭಾರತದಾದ್ಯಂತ
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ಮಾಹಿತಿ:
ಒಟ್ಟು 16 ಪೋಸ್ಟ್ಗಳು ಖಾಲಿ ಇದ್ದು ಅದರಲ್ಲಿ
ಸೀನಿಯರ್ ವೈಸ್ ಪ್ರೆಸಿಡೆಂಟ್ -02
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ -03
ಮ್ಯಾನೇಜರ್ -04
ಡೆಪ್ಯುಟಿ ಮ್ಯಾನೇಜರ್ – 07
ಅರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BE./B.Tech ಪದವಿಯನ್ನ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವೇತನ:
ಈ ಹುದ್ದೆಗೆ ಅನುಗುಣವಾಗಿ ಮಾಸಿಕ ವೇತನವನ್ನ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಇಚ್ಚಿಸುವರು ಕೆಳೆಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
Follow Karunadu Today for more Daily Current Affairs.
Click here to Join Our Whatsapp Group