
ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವಂತಹ ವಿವಿಧ ರಾಜ್ಯಗಳಲ್ಲಿ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ, ಇದರಲ್ಲಿ ಯಾದಗಿರಿ ಉಡುಪಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ವಹಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಗಿಯುವಷ್ಟರಲ್ಲಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ನೇರವಾಗಿ ನೇಮಕ ಮಾಡಿಕೊಳ್ಳುತ್ತದೆ.
ಈ ಹುದ್ದೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕ : 13 – ಜೂನ್ 2024
ಅರ್ಜಿ ಮುಕ್ತಾಯಗೊಳ್ಳುವ ದಿನಾಂಕ : 14 – ಜೂನ್ 2024
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಉಡುಪಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಲು ಇಷ್ಟಪಡುವ ಅಭ್ಯರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಜೂನ್ 18 ರೊಳಗೆ ತಮ್ಮ ಅರ್ಜಿಗಳನ್ನ ಉಪಯೋಜನಾ ಸಮನ್ವಯಾ ಅಧಿಕಾರಿ, ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಕಚರಿಯನ್ನು ಸಂಪರ್ಕಿಸಬಹುದಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಬಿಐಇ ಆರ್ ಟಿಗಳ ಸೇವೆ ಸಲ್ಲಿಸಲು ತಾಲೂಕುವಾರು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಜೂನ್ 15ರೊಳಗೆ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಸಲ್ಲಿಸುವಂತೆ ಇಲಾಖೆ ಉಪ ನಿರ್ದೇಶಕರು ಪ್ರಕಟಿಸಿದ್ದಾರೆ.
ಇನ್ನು ಯಾದಗಿರಿ ಜಿಲ್ಲೆಯಲ್ಲಿ ಶಿಕ್ಷಕರಾಗಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 14ರ ಒಳಗೆ ಕಾಲೇಜಿನ ಪ್ರಾಚಾರ್ಯರಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ:
ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಈ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕಾಣುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.
Follow Karunadu Today for more Daily Current Affairs.
Click here to Join Our Whatsapp Group